ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಬ್ಬ ಆದರ್ಶ ಸ್ವಯಂಸೇವಕನಿಂದ ಬಯಸುವ ಎಲ್ಲ ಗುಣಗಳು ಸಂಜಯ್ ಜೋಷಿ ಅವರಲ್ಲಿವೆ. ಆರ್ಎಸ್ಎಸ್ ಸಿದ್ಧಾಂತವನ್ನು ಮೂರುಹೊತ್ತು ಉಸಿರಾಡುತ್ತಿರುವ ಜೋಷಿ ಒಬ್ಬ ಸರಳ, ಪ್ರಾಮಾಣಿಕ, ಸಮರ್ಥ, ಸಜ್ಜನ ವ್ಯಕ್ತಿ. ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ, ಪ್ರಚಾರದ ಹಪಾಹಪಿ ಇಲ್ಲದ, ಗಂಟೆ-ದಿನಗಳನ್ನು ಲೆಕ್ಕಿಸದೆ ಕೆಲಸ ಮಾಡಬಲ್ಲ ಶ್ರಮಜೀವಿ.
ಆರ್ಎಸ್ಎಸ್ ಸಿದ್ಧಾಂತವನ್ನು ಒಪ್ಪದವರು ಸೈದ್ಧಾಂತಿಕವಾಗಿ ಅವರೊಡನೆ ನೂರೆಂಟು ತಕರಾರುಗಳನ್ನು ತೆಗೆಯಬಹುದು. ಆದರೆ ಆರ್ಎಸ್ಎಸ್ ನುಡಿದಂತೆಯೇ ನಡೆಯುವಂತಿದ್ದರೆ ಅದಕ್ಕೆ ಜೋಷಿ ಅವರಲ್ಲಿ ಎಳ್ಳುಕಾಳಿನಷ್ಟು ದೋಷ ಕಾಣಿಸಬಾರದಿತ್ತು.
ಆಗಿರುವುದೇನು? ಬಿಜೆಪಿ ತೀರಾ ಅವಮಾನಕಾರಿಯಾಗಿ ಜೋಷಿ ಅವರನ್ನು ಹೊರಹಾಕಿದಾಗ ಸ್ವಯಂಸೇವಕರಿಗೆ ಆದರ್ಶದ ಪಾಠ ಹೇಳುತ್ತಿರುವ ಆರ್ಎಸ್ಎಸ್ ತನ್ನೊಬ್ಬ ಆದರ್ಶಸ್ವರೂಪಿ ಪ್ರಚಾರಕನಿಗೆ ಆಗುತ್ತಿರುವ ಅನ್ಯಾಯವನ್ನು ನೋಡಿಯೂ ನೋಡದವರಂತೆ ಕಣ್ಣುಮುಚ್ಚಿಕೊಂಡು ಅವರ ವಿರೋಧಿಗಳ ಜತೆ ಶಾಮೀಲಾಗಿದೆ.
2005ರ ಡಿಸೆಂಬರ್ನ ಕೊನೆ ವಾರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಇಪ್ಪತ್ತೈದು ತುಂಬಿದಾಗ ಐದು ದಿನಗಳ ರಜತ ಜಯಂತಿಯನ್ನು ಮುಂಬೈನಲ್ಲಿ ಆಚರಿಸಲಾಗಿತ್ತು. ಅದನ್ನು ವರದಿಮಾಡಲೆಂದು ಹೋಗಿದ್ದ ನಾನು ಬೆಳಿಗ್ಗೆ ಪತ್ರಕರ್ತರ ಗ್ಯಾಲರಿಯಲ್ಲಿ ಕುಳಿತಿದ್ದಾಗ ಯುವಕನೊಬ್ಬ ಬಂದು ಮಡಚಿದ್ದ ಬಿಳಿಹಾಳೆಯನ್ನು ಕೈಗಿತ್ತು ಮಾಯವಾಗಿ ಹೋದ.
ಪಕ್ಷದ ಹೇಳಿಕೆ ಇರಬಹುದೆಂದು ಬಿಡಿಸಿ ನೋಡಿದರೆ ಅದು `ಸಂಜಯ್ ಜೋಷಿ ಅವರು ನನ್ನ ಜತೆ ಲೈಂಗಿಕ ಸಂಬಂಧ ಹೊಂದಿದ್ದರು....` ಎಂದು ಆರೋಪಿಸಿ ಮಹಿಳೆಯೊಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಲ್ಲಿಸಿದ್ದ ದೂರಿನ ಪ್ರತಿ.
ಆಶ್ಚರ್ಯದಿಂದ ಅಕ್ಕಪಕ್ಕ ನೋಡಿದರೆ ಅಂತಹ ಪ್ರತಿಗಳು ಇನ್ನೂ ಕೆಲವರ ಕೈಯಲ್ಲಿದ್ದವು. ಕೆಲವು ಪತ್ರಕರ್ತರಂತೂ ಮೊದಲೇ ಗೊತ್ತಿದ್ದವರಂತೆ `ಸಿಡಿ ಹೈ, ದೇಖ್ ನ ಹೈ ಕ್ಯಾ?` ಎಂದು ಕಣ್ಣುಮಿಟುಕಿಸತೊಡಗಿದ್ದರು. ಅದಾದ ಸ್ವಲ್ಪ ಹೊತ್ತಿನಲ್ಲಿಯೇ ಸಂಜಯ್ ಜೋಷಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುದ್ದಿ ಹೊರಬಿತ್ತು. ಪಕ್ಷದ ಬೆಳ್ಳಿಹಬ್ಬದ ಸಂಭ್ರಮ ಸಿ.ಡಿ ಹಗರಣದಲ್ಲಿ ಕರಗಿ ಹೋಗಿತ್ತು.
ಇದು ಯಾರ ಕೈವಾಡ ಎನ್ನುವ ಚರ್ಚೆ ಅಲ್ಲಿ ನಡೆದಿದ್ದಾಗ ಕೇಳಿಬಂದ ಮೊದಲ ಹೆಸರು ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರದ್ದು. ನಂತರದ ದಿನಗಳಲ್ಲಿ ಪೊಲೀಸರು ತನಿಖೆ ನಡೆಸಿ ಅದು ನಕಲಿ ಸಿ.ಡಿ. ಎಂದು ತೀರ್ಮಾನಕ್ಕೆ ಬಂದರು. ಆ ಸಿ.ಡಿ.ಯನ್ನು ಗುಜರಾತ್ ಪೊಲೀಸರು ವಿತರಿಸಿದ್ದರು ಎನ್ನುವುದು ಕೂಡಾ ಬಯಲಾಯಿತು.
ಆದರೆ ಅದರ ಹಿಂದಿರುವ ವ್ಯಕ್ತಿ ಯಾರು ಎನ್ನುವ ಪ್ರಶ್ನೆಗೆ ಈಗಲೂ ಉತ್ತರ ಸಿಕ್ಕಿಲ್ಲ. (ಗುಜರಾತ್ನಲ್ಲಿ ನಡೆದ ನರಮೇಧ ಮತ್ತು ಹರೇನ್ ಪಾಂಡ್ಯ ಹತ್ಯೆಯ ರೂವಾರಿ ಯಾರೆಂಬ ಪ್ರಶ್ನೆಯ ಹಾಗೆ).
ಅವಮಾನದಿಂದ ಕುಗ್ಗಿಹೋಗಿ ವರ್ಷಗಳ ಕಾಲ ಅಜ್ಞಾತವಾಸದಲ್ಲಿದ್ದ ಸಂಜಯ್ ಜೋಷಿ ತನ್ನ ಮೇಲಿನ ಆರೋಪದಿಂದ ಮುಕ್ತರಾದ ನಂತರ ಮತ್ತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದರು. ಆಗ ಮತ್ತೆ ಬುಸುಗುಟ್ಟತೊಡಗಿದ್ದವರು ನರೇಂದ್ರ ಮೋದಿ.
ಈ ಬಾರಿ ಪಕ್ಷವನ್ನೇ ತನ್ನ ಬೇಕು-ಬೇಡಗಳಿಗೆ ಒಪ್ಪುವ ಹಾಗೆ ಕುಣಿಸುವಷ್ಟು ಬೆಳೆದಿರುವ ಮೋದಿ ನೇರ ಕಾರ್ಯಾಚರಣೆಯಲ್ಲಿ ಜೋಷಿ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಮೋದಿ ಮತ್ತು ಜೋಷಿ ಇಬ್ಬರೂ ಹೆಚ್ಚು ಕಡಿಮೆ ಒಂದೇ ಸಮಯದಲ್ಲಿ ಆರ್ಎಸ್ಎಸ್ ಪ್ರವೇಶಿಸಿದವರು.
ಗುಜರಾತ್ನಲ್ಲಿ ಇಂದು ಬಿಜೆಪಿ ಭದ್ರವಾಗಿ ಬೇರೂರಿದ್ದರೆ ಅದಕ್ಕೆ ಮೋದಿ ಅವರಂತೆ ಜೋಷಿಯವರೂ ಕಾರಣ. 2001ರಲ್ಲಿ ಕೇಶುಭಾಯಿ ಪಟೇಲ್ ಪದಚ್ಯುತಿಯಾದ ನಂತರ ಗುಜರಾತ್ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಮೊದಲು ಮಾಡಿದ ಕೆಲಸ ಸಂಜಯ್ ಜೋಷಿ ಅವರನ್ನು ರಾಜ್ಯದಿಂದ ಹೊರಹಾಕಿದ್ದು. ಆಗಲೂ ಮೋದಿ ಒತ್ತಡಕ್ಕೆ ಮಣಿದ ಬಿಜೆಪಿ ಜೋಷಿ ಅವರನ್ನು ಗುಜರಾತ್ನಿಂದ ಕರೆಸಿಕೊಂಡು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿತ್ತು.
ಬಿಜೆಪಿಯ ಈಗಿನ ಅಧ್ಯಕ್ಷ ನಿತಿನ್ ಗಡ್ಕರಿ ಮತ್ತು ಸಂಜಯ್ ಜೋಷಿ ಇಬ್ಬರದ್ದೂ ಒಂದೇ ಊರು. ನಾಗಪುರದಲ್ಲಿ ಇಬ್ಬರೂ ಜತೆಯಲ್ಲಿ ಆರ್ಎಸ್ಎಸ್ ಶಾಖೆಗೆ ಹೋಗುವ ಮೂಲಕ ಪರಿವಾರ ಸೇರಿದವರು. ಇಬ್ಬರು ಬೆಳೆಯುತ್ತಾ ಹೋದಂತೆ ಹಿಡಿದ ದಾರಿ ಮಾತ್ರ ಎಂದೂ ಪರಸ್ಪರ ಸಂಧಿಸಲು ಸಾಧ್ಯ ಇಲ್ಲದ್ದು.
ಮೊನ್ನೆಮೊನ್ನೆವರೆಗೆ ಜೋಷಿ ಅವರ ಬೆಂಬಲಕ್ಕೆ ನಿಂತಿದ್ದ ಪಕ್ಕಾ ವ್ಯಾಪಾರಿಯಂತೆ ಕಾಣುವ ಗಡ್ಕರಿ ಇದ್ದಕ್ಕಿದ್ದಂತೆ ಬಾಲ್ಯದ ಗೆಳೆಯನ ಕೈಬಿಟ್ಟು ಮೋದಿ ಜತೆ ಸೇರಿಕೊಂಡಿದ್ದಾರೆ. ಆರ್ಎಸ್ಎಸ್ಭೀಷ್ಮಾಚಾರ್ಯರೆಲ್ಲ `ಹಿಂದೂ ಹೃದಯ ಸಾಮ್ರಾಟ`ನ ಆದೇಶಕ್ಕೆ ತಲೆಯಾಡಿಸುತ್ತಾಕೂತಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕಾರಿಣಿ ನಂತರದ ಬೆಳವಣಿಗೆಗಳನ್ನು ನೋಡಿದರೆ ಪಕ್ಷದ ಏಕಮೇವಾದ್ವಿತಿಯ ನಾಯಕನಾಗಿ ನರೇಂದ್ರಮೋದಿ ಉದಯಿಸಿರುವ ಹಾಗೆ ಕಾಣುತ್ತಿದೆ. `ಮೋದಿ ಅವರೇ ಮುಂದಿನ ಪ್ರಧಾನಿ` ಎಂದು ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗುವ ಮೊದಲೇ ಅವರ ಅಭಿಮಾನಿ ಬಳಗ ಜಯಘೋಷ ಮಾಡುತ್ತಿದೆ.
ವಿಚಿತ್ರವೆಂದರೆ ಈ ಸಂಭ್ರಮ-ಸಡಗರ ಮೋದಿ ಅವರ ಪಕ್ಷದ ಇಲ್ಲವೇ, ಆರ್ಎಸ್ಎಸ್, ವಿಎಚ್ಪಿ, ಎಬಿವಿಪಿ, ಎಚ್ಎಂಎಸ್ನ ನಾಯಕರ ಮುಖಗಳಲ್ಲಿ ಕಾಣುತ್ತಿಲ್ಲ. ಮೋದಿ ಅವರ ಬಹುಕಾಲದ ವಿರೋಧಿಗಳಾಗಿರುವ ಕೇಶುಭಾಯಿ ಪಟೇಲ್, ಸುರೇಶ್ಮೆಹ್ತಾ, ರಾಣಾ ಮೊದಲಾದವರು ರಾಜ್ಯದಲ್ಲಿ ಮತ್ತೆ ಬಂಡೆದ್ದಿದ್ದಾರೆ.
ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ, ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಮೊದಲಾದವರು ಬಹಿರಂಗವಾಗಿ ಮೋದಿ ಅವರ ನಡವಳಿಕೆಯನ್ನು ವಿರೋಧಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾಣಿ ಅವರು ಇತ್ತೀಚೆಗೆ ತಮ್ಮ ಬ್ಲಾಗ್ನಲ್ಲಿ ನಿತಿನ್ ಗಡ್ಕರಿ ಕಾರ್ಯಶೈಲಿಯನ್ನು ಟೀಕಿಸಿದ್ದರೂ ಅವರ ಬಾಣದ ಗುರಿ ನರೇಂದ್ರಮೋದಿಯವರೇ ಆಗಿದ್ದಾರೆ.
ಸಂಘ ಪರಿವಾರ ಎನ್ನುವುದು ಈಗ ಒಡೆದ ಮನೆ. ಬಿಜೆಪಿಯ ಮುಖವಾಣಿ ಪತ್ರಿಕೆಯಾದ `ಕಮಲ ಸಂದೇಶ`ದಲ್ಲಿ ಮೋದಿ ವಿರುದ್ಧ ಲೇಖನ ಪ್ರಕಟವಾಗಿದ್ದರೆ, ಆರ್ಎಸ್ಎಸ್ ಮುಖವಾಣಿ `ಆರ್ಗನೈಸರ್` ಪತ್ರಿಕೆಯಲ್ಲಿ ಮೋದಿ ಅವರನ್ನು ಅಟಲಬಿಹಾರಿ ವಾಜಪೇಯಿ ಅವರಿಗೆ ಹೋಲಿಸಿ ಹೊಗಳಿ ಬರೆಯಲಾಗಿದೆ.
ನಿಯಂತ್ರಣ ಮೀರಿ ಬೆಳೆಯುತ್ತಿರುವ ಮೋದಿ ಬಗ್ಗೆ ಆರ್ಎಸ್ಎಸ್ ನಾಯಕರಲ್ಲಿಯೂ ಅಸಮಾಧಾನ ಇದೆ. ಅನುಯಾಯಿಗಳ ಒತ್ತಡದಿಂದಾಗಿ ಅವರೂ ತುಟಿ ಬಿಚ್ಚಲಾರರು. ಬಿಜೆಪಿ ಮೂಲಕ ಅಧಿಕಾರದ ರುಚಿ ಕಂಡಿರುವ ಆರ್ಎಸ್ಎಸ್ ನಾಯಕರು ಇತ್ತೀಚಿನ ವರ್ಷಗಳಲ್ಲಿ ಬದಲಾಗಿ ಹೋಗಿದ್ದಾರೆ.
ಆದರೆ ಸಂಘ ಸಾರುತ್ತಿದ್ದ ಹಿಂದುತ್ವದ ಮೂಲಸಿದ್ಧಾಂತಕ್ಕೆ ಈಗಲೂ ಬದ್ಧವಾಗಿರುವ ಅನುಯಾಯಿಗಳ ಒಂದು ವರ್ಗ ಮೋದಿ ಅವರಲ್ಲಿಯೇ ಭವಿಷ್ಯದ ನಾಯಕನನ್ನು ಕಾಣತೊಡಗಿದೆ.
ಇದರಿಂದಾಗಿ ತಮ್ಮ ಮೇಲೆ ಸವಾರಿ ಮಾಡಲು ಹೊರಟಿರುವ ನರೇಂದ್ರ ಮೋದಿ ಅವರ ಬಗ್ಗೆ ಎಷ್ಟೇ ಅಸಮಾಧಾನ ಇದ್ದರೂ ಆರ್ಎಸ್ಎಸ್ ಅನಿವಾರ್ಯವಾಗಿ ಮೋದಿ ಅವರನ್ನು ಬೆಂಬಲಿಸುತ್ತಿರುವಂತೆ ಕಾಣುತ್ತಿದೆ.
ನರೇಂದ್ರ ಮೋದಿಯವರು ಹೊಸದೇನನ್ನೂ ಮಾಡಲು ಹೊರಟಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ಗುಜರಾತ್ನಲ್ಲಿಯೇ ಮಾಡಿದ್ದನ್ನು ಈಗ ರಾಷ್ಟ್ರಮಟ್ಟದಲ್ಲಿ ಮಾಡಲು ಹೊರಟಿದ್ದಾರೆ.
ಮುಖ್ಯಮಂತ್ರಿಯಾದ ನಂತರ ನರೇಂದ್ರ ಮೋದಿ ಗುಜರಾತ್ನಲ್ಲಿ ಮೊದಲು ಮಾಡಿದ್ದು ವಿಶ್ವಹಿಂದೂ ಪರಿಷತ್, ಎಚ್ಎಂಎಸ್, ಎಬಿವಿಪಿ ಮೊದಲಾದ ಸಂಘ ಪರಿವಾರದ ಅಂಗಸಂಸ್ಥೆಗಳ ನಾಯಕರ ಬಾಯಿಮುಚ್ಚಿಸಿದ್ದು. ವಿಎಚ್ಪಿಯ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಈಗಲೂ ತನ್ನ ಹುಟ್ಟೂರಿನಲ್ಲಿಯೇ ತುಟಿಬಿಚ್ಚುವಂತಿಲ್ಲ.
ಎಲ್.ಕೆ.ಅಡ್ವಾಣಿ ಅವರು ಈಗ ಗುಡುಗುತ್ತಿದ್ದರೂ ಪಕ್ಷದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಮೋದಿ ಹಿತರಕ್ಷಕನಾಗಿಯೇ ಕೆಲಸ ಮಾಡಿದ್ದು. `ರಾಜಧರ್ಮ` ಪಾಲಿಸುವಂತೆ ವಾಜಪೇಯಿ ಕರೆಕೊಟ್ಟ ನಂತರ ಇನ್ನೇನು ಮೋದಿ ಪದಚ್ಯುತಿಯಾಗಿಯೇ ಹೋಯಿತು ಎಂದು ಎಲ್ಲರೂ ತಿಳಿದಿದ್ದರು.
ಆಗ ಅವರನ್ನು ರಕ್ಷಿಸಿದ್ದು ಅಡ್ವಾಣಿ. ಮೋದಿ ನೆರವಿಲ್ಲದೆ ಇದ್ದರೆ ಲೋಕಸಭೆಗೆ ಆರಿಸಿಬರುವುದು ಕಷ್ಟ ಎನ್ನುವುದು ಈ ಶರಣಾಗತಿಗೆ ಒಂದು ಕಾರಣವಾದರೆ, ಪ್ರಧಾನಮಂತ್ರಿ ಸ್ಥಾನದ ಓಟಕ್ಕೆ ಇಳಿದಾಗ ಮೋದಿ ಬೆಂಬಲಿಸಬಹುದು ಎಂಬ ದೂರಾಲೋಚನೆ ಇನ್ನೊಂದು ಕಾರಣ ಇರಬಹುದು.
ಗುಜರಾತ್ನಲ್ಲಿ ಈಗ ಇರುವುದು ದೇಶದ ಉಳಿದೆಡೆ ಕಾಣುತ್ತಿರುವ ಬಿಜೆಪಿ ಖಂಡಿತ ಅಲ್ಲ, ಅದು ನರೇಂದ್ರ ಮೋದಿ ಬಿಜೆಪಿ. ಆ ರಾಜ್ಯದ ಬಿಜೆಪಿಯನ್ನು ಅವರು ಪ್ರತ್ಯೇಕ ಪ್ರಾದೇಶಿಕ ಪಕ್ಷದಂತೆಯೇ ನಡೆಸಿಕೊಂಡು ಬಂದಿದ್ದಾರೆ. ಪಕ್ಕಾ ಪಾಳೆಯಗಾರನಂತೆ ವಿರೋಧಿಸಿದವರ ತಲೆ ಕಡಿಯುತ್ತಾ, ಶರಣಾದವರನ್ನು ಅಡಿಯಾಳುಗಳನ್ನಾಗಿ ಮಾಡುತ್ತಾ ಬಂದಿದ್ದಾರೆ.
ಈಗ ಇಡೀ ಪಕ್ಷವನ್ನೇ ಅಪಹರಣ ಮಾಡಲು ಹೊರಟಿದ್ದಾರೆ. ಅಪಹರಣ ಎಂದರೆ ಪ್ರತಿಭಟಿಸಿದವರ ಕೈಕಾಲು ಕಟ್ಟಿಹಾಕಿ, ಬಾಯಿಮುಚ್ಚಿಸಿ ಹೊತ್ತುಕೊಂಡು ಹೋಗುವುದು. ಮೋದಿ ಅದನ್ನೇ ಮಾಡುತ್ತಿದ್ದಾರೆ. ಕಾನೂನು ಪ್ರಕಾರ ಅಪಹರಣ ಎನ್ನುವುದು ಅಪರಾಧ.
ಆದರೆ `ಅಪಹರಣಕಾರನ` ಜತೆ ಶಾಮೀಲಾಗಿರುವ ಆರ್ಎಸ್ಎಸ್ನ ನ್ಯಾಯಶಾಸ್ತ್ರದಲ್ಲಿ ಅಪಹರಣಕ್ಕೆ ಬೇರೆ ಅರ್ಥ ಇದ್ದರೂ ಇರಬಹುದು ಇಲ್ಲವೇ ಅಪಹರಣಕಾರರ ಜತೆಯಲ್ಲಿಯೇ ಬದುಕುತ್ತಾ ಕೊನೆಗೆ ಆತನನ್ನೇ ಪ್ರೀತಿಸುವ `ಸ್ಟಾಕ್ಹೋಂ ಸಿಂಡ್ರೋಮ್`ಗೆ ಆರ್ಎಸ್ಎಸ್ ಒಳಗಾಗಿರಬಹುದು.
ಉಳಿದವರ ಗೊಂದಲ ಏನೇ ಇದ್ದರೂ ನರೇಂದ್ರ ಮೋದಿ ಅವರಿಗೆ ತನ್ನ ಮುಂದಿನ ದಾರಿ ಬಗ್ಗೆ ಸ್ಪಷ್ಟತೆ ಇರುವಂತೆ ಕಾಣುತ್ತಿದೆ. ಅವರ ರಾಜಕೀಯ ಜೀವನದಲ್ಲಿ ಮುಂದಿನ ಎರಡು ವರ್ಷಗಳು ನಿರ್ಣಾಯಕವಾದುದು.
ಈ ವರ್ಷದ ಕೊನೆಯಲ್ಲಿ ಅವರು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಎದುರಿಸಬೇಕಾಗಿದೆ, ಆ ಚುನಾವಣೆಯ ಫಲಿತಾಂಶ, ನಂತರದ ಒಂದೂವರೆ ವರ್ಷಗಳ ಅವಧಿಯಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಅವರ ಪಾತ್ರವನ್ನು ನಿರ್ಧರಿಸಲಿದೆ.
ಇದಕ್ಕಾಗಿಯೇ ಅವರು ತಾಲೀಮು ಪ್ರಾರಂಭಿಸಿರುವುದು. ಅಡ್ವಾಣಿಯವರನ್ನೋ, ಸುಷ್ಮಾ ಸ್ವರಾಜ್ ಅವರನ್ನೋ ಪ್ರಧಾನಿಯಾಗಿ ಮಾಡುವುದು ಅವರ ಉದ್ದೇಶ ಖಂಡಿತ ಅಲ್ಲ. ತಾನೇ ಪ್ರಧಾನಿಯಾಗಬೇಕೆಂಬ ಆಕಾಂಕ್ಷೆ ಅವರಲ್ಲಿ ಎಂದೋ ಹುಟ್ಟಿಕೊಂಡು ಬಲವಾಗಿ ಬೇರುಬಿಟ್ಟಿದೆ.
ಈ ಮಹತ್ವಾಕಾಂಕ್ಷಿ ಮೋದಿಯವರನ್ನು ನೊಡಿದಾಗ ಯಾಕೋ ಅಧಿಕಾರವನ್ನು ಉಳಿಸಿಕೊಳ್ಳಲು ಸರ್ವಾಧಿಕಾರಿಯಾಗಿ ಬದಲಾಗಿ ಹೋದ ಇಂದಿರಾಗಾಂಧಿ ನೆನಪಾಗುತ್ತಾರೆ. ಅವರ ವಿರೋಧಿಗಳು ಕೂಡಾ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಟೀಕಿಸಿದ್ದಾರೆ.
ಇಂದಿರಾಗಾಂಧಿಯವರಂತೆಯೇ ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಮೋದಿ ಬಯಸಿದ್ದನ್ನು ಪಡೆಯಲು ಏನು ಬೇಕಾದರು ಮಾಡಲು ಹಿಂಜರಿಯಲಾರರು. ಮಹತ್ವಾಕಾಂಕ್ಷಿಗಳ ಹಾದಿ ತಪ್ಪಿಸುವುದು ಸೋಲಿನ ಭೀತಿಯಿಂದ ಹುಟ್ಟುವ ಹತಾಶೆ.
ಹತಾಶೆಗೀಡಾದ ವ್ಯಕ್ತಿ ಪರಿಣಾಮವನ್ನು ಲೆಕ್ಕಿಸದೆ ತನಗೆ ಸರಿಕಂಡ ದಾರಿಯಲ್ಲಿ ನುಗ್ಗುತ್ತಾನೆ. ಹತ್ತುವರ್ಷಗಳ ಹಿಂದೆ ಗುಜರಾತ್ನಲ್ಲಿ ನಡೆದ ಕೋಮುಗಲಭೆಯನ್ನು ಕಣ್ಣಾರೆ ನೋಡಿದ ನನಗೆ ಯಾಕೋ ದೇಶದಲ್ಲಿ ಗುಜರಾತ್ ಕಾಣತೊಡಗಿದೆ. ನನ್ನ ಭೀತಿ

No comments:
Post a Comment